Monday, December 1, 2025
Google search engine
Homeಸಿನಿ ಸಮಾಚಾರಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ದೃಷ್ಟಿಬೊಟ್ಟು’

ರೂಪವೇ ಶಾಪವಾದವಳ ಸುತ್ತ ಸುತ್ತಿಕೊಂಡ ಕೌಟುಂಬಿಕ ಕತೆ ಸೆಪ್ಟೆಂಬರ್ 9ರಿಂದ

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ.
ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. 

‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ. 

ಈ ಧಾರಾವಾಹಿಯ ಸ್ಪೆಷಲ್ ಪಾರ್ಟನರ್ ಸ್ಪರ್ಶ್ ಮಸಾಲಾ. ಎರಡು ವಿಭಿನ್ನ ಕೌಟುಂಬಿಕ ಹಿನ್ನೆಲೆಗಳಿಂದ ಬಂದ ದೃಷ್ಟಿ ಎಂಬ ಹುಡುಗಿ ಹಾಗೂ ದತ್ತ ಶ್ರೀರಾಮ್ ಪಾಟೀಲ್ ಎಂಬ ಹುಡುಗನ ಬದುಕುಗಳು ಸಂಧಿಸಿದಾಗ ನಡೆಯುವ ಕುತೂಹಲಕರ ಕಥಾನಕವನ್ನು ‘ದೃಷ್ಟಿಬೊಟ್ಟು’ ಎಳೆಎಳೆಯಾಗಿ ಅನಾವರಣಗೊಳಿಸುತ್ತಾ ಹೋಗುತ್ತದೆ. ದೃಷ್ಟಿಯ ಪಾಲಿಗೆ ರೂಪ ಅನ್ನುವುದೇ ಶಾಪ. ತನ್ನ ರೂಪವನ್ನೇ ಬದಲಾಯಿಸಿಕೊಂಡು ಬದುಕುತ್ತಿರುವ ಅವಳಿಗೆ ತನ್ನ ಸೋದರಿಯನ್ನು ಮರಳಿ ಮನೆಗೆ ಕರೆತಂದು ಕುಟುಂಬವನ್ನು ಒಂದು ಮಾಡಬೇಕೆಂಬ ಗುರಿ. ಮೊದಲು ಮೆಕಾನಿಕ್ ಆಗಿ ಈಗ ರೌಡಿಯಾಗಿರುವ ಕಥಾನಾಯಕ ದತ್ತ, ಸುಂದರವಾಗಿರುವ ಹೆಣ್ಣುಗಳನ್ನ ಕಂಡರೆ ಉರಿದು ಬೀಳುತ್ತಾನೆ. ದುರುಳ ಪೋಲೀಸನೊಬ್ಬನ ಕೈಗೆ ಸಿಕ್ಕ ದೃಷ್ಟಿ ಅವನ ಕಿರುಕುಳಕ್ಕೆ ಸಿಕ್ಕು ಒದ್ದಾಡುತ್ತಿರುವಾಗ ದತ್ತನ ಪ್ರವೇಶವಾಗುತ್ತದೆ. ಆಮೇಲೆ ಕತೆ ಹಲವು ಊಹಿಸಲಾಗದ ತಿರುವುಗಳನ್ನು ತೆಗೆದುಕೊಳ‌್ಳುತ್ತಾ ಮುಂದೆ ಸಾಗುತ್ತದೆ. ದೃಷ್ಟಿಗೆ ತನ್ನ ಸೋದರಿ ಸಿಕ್ಕಳೆ? ವಿಧಿ ದತ್ತ ಮತ್ತು ದೃಷ್ಟಿಯನ್ನು ಒಂದುಮಾಡುವುದೆ? ದತ್ತನನ್ನು ಅವನ ದುಷ್ಟ ಸೋದರಿಯರಿಂದ ದೃಷ್ಟಿ ಕಾಪಾಡಬಲ್ಲಳೆ? ಇಂಥ ಎಲ್ಲ ಪ್ರಶ್ನೆಗಳಿಗೂ ಉತ್ತರ ಬೇಕೆಂದರೆ ನೀವು ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೋಡಬೇಕು. 
ಅಂದರೆ ಸೆಪ್ಟೆಂಬರ್ 9ರ ಸಂಜೆ 6:30ಕ್ಕೆ ತಪ್ಪದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮೊದಲ ಸಂಚಿಕೆಯನ್ನು ವೀಕ್ಷಿಸಬೇಕು. ಬಳಿಕ ಜಿಯೊ ಸಿನಿಮಾ ಆಪ್ ನಲ್ಲಿ ಕೂಡ ‘ದೃಷ್ಟಿಬೊಟ್ಟು’ ಧಾರಾವಾಹಿಯನ್ನು ನೀವು ವೀಕ್ಷಿಸಬಹುದು.

RELATED ARTICLES
- Advertisment -
Google search engine

Most Popular

Recent Comments

Swarupa Sandarshan - WordPress Downloads -
Deneme Bonusu Veren Siteler +750 TL Ekim 2025 - Güvenilir bahis siteleri Ekim 2025 - En Popüler Slot Oyunları Ekim 2025: Guns N’ Roses oyunu
Casino Sites October 2025: Trusted Online Casino - Betting Sites October 2025: Trusted Live Betting - Top Slot Games October 2025: Guns N’ Roses play