Monday, June 16, 2025
Google search engine
Homeಸಿನಿ ಸಮಾಚಾರಜೂನಿಯರ್‌ ಎನ್‌ಟಿಆರ್‌- ಪ್ರಶಾಂತ್‌ ನೀಲ್‌ ಚಿತ್ರದ ಅದ್ಧೂರಿ ಮುಹೂರ್ತ; 2026 ಜನವರಿ 9ರಂದು ಪ್ಯಾನ್‌ ಇಂಡಿಯಾ...

ಜೂನಿಯರ್‌ ಎನ್‌ಟಿಆರ್‌- ಪ್ರಶಾಂತ್‌ ನೀಲ್‌ ಚಿತ್ರದ ಅದ್ಧೂರಿ ಮುಹೂರ್ತ; 2026 ಜನವರಿ 9ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌…

ಜೂನಿಯರ್‌ ಎನ್‌ಟಿಆರ್‌- ಪ್ರಶಾಂತ್‌ ನೀಲ್‌ ಚಿತ್ರದ ಅದ್ಧೂರಿ ಮುಹೂರ್ತ; 2026 ಜನವರಿ 9ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌…

ಜೂನಿಯರ್‌ ಎನ್‌ಟಿಆರ್‌- ಪ್ರಶಾಂತ್‌ ನೀಲ್‌ ಚಿತ್ರದ ಅದ್ಧೂರಿ ಮುಹೂರ್ತ; 2026 ಜನವರಿ 9ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ರಿಲೀಸ್‌…ಜೂನಿಯರ್‌ ಎನ್ ಟಿಆರ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಇನ್ನೂ ಶೀರ್ಷಿಕೆ ಅಂತಿಮವಾಗದ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರ ನಿರ್ಮಾಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್‌ ಶುಭ ಶುಕ್ರವಾರದಂದು ಘೋಷಣೆ ಮಾಡಿದ್ದಾರೆ. ಈ ಬಿಗ್ ಬಜೆಟ್ ಸಿನಿಮಾ 2026ರ ಜನವರಿ 9 ರಂದು ಬಿಡುಗಡೆಯಾಗಲಿದೆ. ಅದ್ಧೂರಿಯಾಗಿ ಮುಹೂರ್ತ ಕಾರ್ಯಕ್ರಮವೂ ಜರುಗಿದ್ದು, ಇನ್ನೇನು ಶೀಘ್ರದಲ್ಲಿ ಶೂಟಿಂಗ್‌ ಸಹ ಶುರುವಾಗಲಿದೆ.

ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಅಭಿನಯದ ಈ ಸಿನಿಮಾದ ಲಾಂಚಿಂಗ್‌ ಇವೆಂಟ್‌ ಶುಕ್ರವಾರ ಹೈದರಾಬಾದ್‌ನಲ್ಲಿ ನಡೆಯಿತು. ಯಾವುದೇ ಪೂರ್ವ ಮಾಹಿತಿ ಇಲ್ಲದೆ ಸರಳವಾಗಿ ಈ ಮುಹೂರ್ತ ಸಮಾರಂಭವನ್ನು ನಡೆಸಲಾಯಿತು. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಚಿತ್ರದ ಉದ್ಘಾಟನಾ ಕಾರ್ಯಕ್ರಮದ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ. ಎನ್‌ಟಿಆರ್ ಮತ್ತು ಪ್ರಶಾಂತ್ ನೀಲ್ ಜೊತೆಗೆ ಕಲ್ಯಾಣ್ ರಾಮ್ ಮತ್ತು ಚಿತ್ರದ ನಿರ್ಮಾಪಕರು ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.ಈಗಾಗಲೇ ಎನ್‌ಟಿಆರ್‌ ಮತ್ತು ನೀಲ್‌ ಜೋಡಿಯ ಸಿನಿಮಾ ಘೋಷಣೆ ಆಗಿಯೇ ವರ್ಷಗಳು ಕಳೆದಿವೆ. ಆದರೆ, ಮುಂದುವರಿದು ಯಾವುದೇ ಅಪ್ಡೇಟ್‌ ಹೊರಬಂದಿರಲಿಲ್ಲ. ಇದೀಗ ಎನ್‌ಟಿಆರ್‌ ಮತ್ತು ನೀಲ್‌ ಕಾಂಬಿನೇಷನ್‌ ಸಿನಿಮಾ ಸೆಟ್ಟೇರಿದೆ. ಈ ಸುದ್ದಿ ತಿಳಿದ ಅವರ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಮುಹೂರ್ತ ಮಾತ್ರವಲ್ಲದೆ, ಚಿತ್ರದ ಬಿಡುಗಡೆಯ ದಿನಾಂಕವನ್ನೂ ಘೋಷಣೆ ಮಾಡಲಾಗಿದೆ. 2026ರ ಸಂಕ್ರಾಂತಿಗೆ ಈ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಮೂಲ ತೆಲುಗು ಜತೆಗೆ, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂನಲ್ಲಿ ಚಿತ್ರಮಂದಿರಕ್ಕೆ ಲಗ್ಗೆ ಇಡಲಿದೆ.

ಬ್ಲಾಕ್‌ಬಸ್ಟರ್ ಹಿಟ್‌ ಸಿನಿಮಾಗಳಿಂದಲೇ ಹೆಸರುವಾಸಿಯಾದ ಪ್ರಶಾಂತ್ ನೀಲ್, ಎನ್‌ಟಿಆರ್‌ ಜತೆಗಿನ ಈ ಸಿನಿಮಾಕ್ಕೆ ಇನ್ನಷ್ಟು ಶ್ರಮ ಹಾಕುತ್ತಿದ್ದಾರೆ. ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರವನ್ನು ಕಲ್ಯಾಣ್ ರಾಮ್ ನಂದಮೂರಿ, ನವೀನ್ ಯೆರ್ನೇನಿ, ರವಿಶಂಕರ್ ಯಲಮಂಚಿಲಿ ಮತ್ತು ಹರಿಕೃಷ್ಣ ಕೊಸರಾಜು ಅವರು ಮೈತ್ರಿ ಮೂವೀ ಮೇಕರ್ಸ್ ಮತ್ತು ಎನ್‌ಟಿಆರ್ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸುತ್ತಿದ್ದಾರೆ. ಕೆಜಿಎಫ್‌, ಸಲಾರ್‌ ಖ್ಯಾತಿಯ ಭುವನ್ ಗೌಡ ಈ ಚಿತ್ರಕ್ಕೆ ಛಾಯಾಗ್ರಹಣ ಮಾಡಲಿದ್ದು, ರವಿ ಬಸ್ರೂರ್ ಸಂಗೀತ ಸಂಯೋಜಿಸಲಿದ್ದಾರೆ. ಚಿತ್ರದ ಪಾತ್ರವರ್ಗ ಇನ್ನಷ್ಟೇ ಅಂತಿಮವಾಗಬೇಕಿದೆ.

RELATED ARTICLES
- Advertisment -
Google search engine

Most Popular

Recent Comments