Monday, December 1, 2025
Google search engine
Homeಸಿನಿ ಸಮಾಚಾರಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ 'ಸೂರ್ಯ-45' ಸಿನಿಮಾ ಅನೌನ್ಸ್

ಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಸೂರ್ಯ-45’ ಸಿನಿಮಾ ಅನೌನ್ಸ್

ಡ್ರೀಮ್ ವಾರಿಯರ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ‘ಸೂರ್ಯ-45’ ಸಿನಿಮಾ ಅನೌನ್ಸ್

ದಕ್ಷಿಣ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಗಳಲ್ಲಿ ಒಂದು ಡ್ರೀಮ್ ವಾರಿಯರ್ ಪಿಕ್ಚರ್ಸ್. ಈ ಸಂಸ್ಥೆಯಡಿ ಧೀರನ್, ಅರುವಿ, ಎನ್‌ಜಿಕೆ, ರಾಕ್ಷಸಿ, ಖೈದಿ, ಭೋಲಾ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣಗೊಂಡಿವೆ. ಇದೀಗ ಡ್ರೀಮ್ ವಾರಿಯರ್ ಪಿಕ್ಚರ್ಸ್ ತಮಿಳಿನ ಸೂಪರ್ ಸ್ಟಾರ್ ಸೂರ್ಯ ಜೊತೆ ಕೈ ಜೋಡಿಸಿದೆ. ಈ ಸಂಸ್ಥೆಯಡಿ ಸೂರ್ಯ ಅವರ 45ನೇ ಚಿತ್ರ ನಿರ್ಮಾಣವಾಗಲಿದೆ.

ಮೂಕುತಿ ಅಮ್ಮನ್ ಮತ್ತು ವೀಟ್ಲ ವಿಶೇಷಂನಂತಹ ಸಾಮಾಜಿಕ ಜವಾಬ್ದಾರಿಯುತ ಚಿತ್ರಗಳನ್ನು ನಿರ್ದೇಶಿಸಲು ಹೆಸರುವಾಸಿಯಾಗಿರುವ ಆರ್‌ಜೆ ಬಾಲಾಜಿ ಸೂರ್ಯ ಅವರ 45ನೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. RJ ಬಾಲಾಜಿ ಪ್ರಸ್ತುತ ಈ ಸಿನಿಮಾದ ಪ್ರೀ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದ್ದಾರೆ.

ಆರ್‌ಜೆ ಬಾಲಾಜಿ ಅವರ ಚಿತ್ರಕಥೆ ಇಷ್ಟಪಟ್ಟಿರುವ ಆಸ್ಕರ್ ವಿಜೇತ ಎ.ಆರ್ ರೆಹಮಾನ್ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಲು ಸಮ್ಮತಿ ಸೂಚಿಸಿದ್ದಾರೆ. ಈ ಹಿಂದೆ ಸೂರ್ಯ ಹಾಗೂ ರೆಹಮಾನ್ ಸಿಲ್ಲುನು ಒರು ಕಾದಲ್, ಆಯುಧ ಎಳುತ್ತು ಮತ್ತು ’24’ ನಂತಹ ಕ್ಲಾಸಿಕ್ ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು.

ಆರ್‌ಜೆ ಬಾಲಾಜಿ ಮತ್ತು ಡ್ರೀಮ್ ವಾರಿಯರ್ ಪಿಕ್ಚರ್ಸ್ ಈ ಪ್ರತಿಷ್ಠಿತ ಪ್ರಾಜೆಕ್ಟ್ ಗೆ ಸೂರ್ಯ ಜೊತೆಗೆ ಹಲವು ದೊಡ್ಡ ತಾರಾಬಳಗ ಸೇರ್ಪಡೆಯಾಗಲಿದೆ. ನವೆಂಬರ್ 2024 ಶೂಟಿಂಗ್ ಹೊರಡಲಿರುವ ಚಿತ್ರತಂಡ 2025 ರ ದ್ವಿತೀಯಾರ್ಧದಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದೆ.

RELATED ARTICLES
- Advertisment -
Google search engine

Most Popular

Recent Comments

Swarupa Sandarshan - WordPress Downloads -
Deneme Bonusu Veren Siteler +750 TL Ekim 2025 - Güvenilir bahis siteleri Ekim 2025 - En Popüler Slot Oyunları Ekim 2025: Guns N’ Roses oyunu
Casino Sites October 2025: Trusted Online Casino - Betting Sites October 2025: Trusted Live Betting - Top Slot Games October 2025: Guns N’ Roses play